ಸಂತೆಯಲಿ ಮನೆ ಮಾಡಿ…!!!

ಅಂದ ಹಾಗೆ, ಈ ನಡುವೆ ನನ್ನ ಮನೆ ಎಂಬುದು “ಸಂತೆಯಲ್ಲಿ ಮನೆಯ ಮಾಡಿ…” ಅನ್ನೋ ತರಹ ಆಗೋಗಿದೆ!

ತುಂಬಾ ಸುಸ್ತಾಗಿ ಮನೆಗೆ ರಾತ್ರಿ ಯಾವುದೋ ಹೊತ್ತಿನಲ್ಲಿ ಬಂದು, ನಾಲ್ಕು ತುತ್ತು ಶಾಸ್ತ್ರಕ್ಕೆ ಅಂತ ತಿಂದು ಇನ್ನೇನು ಮಲಗಬೇಕು ಅಂತ ಹಾಸಿಗೆಗೆಗೆ ಬಿದ್ದರೆ, ಹಿಂದಲ ಮನೆಯವರ ಮೈಕ್ ಸೆಟ್ ಶುರೂ.

ಆಂಧ್ರ ಕಡೆ ರೆಡ್ಡಿಗಳೂ ಅಂತ ಕಾಣುತ್ತೆ. ಅದೇನು ಕುರುಡು ಪ್ರೀತಿಯೋ ಕಾಣೆ! ಆಂಧ್ರಪ್ರದೇಶದ ಮಾಜೀ ಮುಖ್ಯ ಮಂತ್ರಿ ದಿವಂಗತ. ವೈ.ಎಸ್. ರಾಜಶೇಖರ ರೆಡ್ಡಿಯವರನ್ನು ಗುಣಗಾನ ಮಾಡುವ ಜಾನಪದ ಶೈಲಿಯ ಹಾಡನ್ನು ಜೋರಾಗಿ ಹಾಕಿಬಿಡುತ್ತಾರೆ. ಅಲ್ಲಿಗೆ ನನ್ನ ಎಡಗಿವಿ ಮಟಾಷ್!

ಇನ್ನು ಬಲಗಿವಿಗೆಗೆ ಯಾಕೆ ಪುರಸೊತ್ತೂ ಅಂತ ಆ ಕಡೆ ಮನೆಯ ಒರಿಸ್ಸಾ ಮುದುಕ ತಾನೇನು ಕಮ್ಮಿ ಅಂತ ಜೋರಾಗಿ ಟೀವಿ ಹಾಕುತ್ತಾನೆ. ಅಲ್ಲಿಗೆ ನನ್ನ ಎರಡೂ ಕಿವಿಗಳ ತಮಟೆಗಳು ಕಿತ್ತು ಊರಗಲವಾಗಿರುತ್ತವೆ.

ಮೊದಲೇ ಬೇಸಿಗೆ, ಜೊತೆಗೆ ಈ ತಾರಕ ಸ್ವರದ ಕಿರಿಕಿರಿ ನನ್ನ ನಿದ್ದೆ ಅಸ್ತಗತವಾಗಿ, ಬದುಕು ಹರಹರಾ ಎನ್ನುವಂತಾಗಿದೆ…

ನಡು ರಾತ್ರಿ ಯಾವಾಗಲೋ ಅವರಿಗೇ ಬೇಜಾರಾದಾಗ ಬ್ಯಾಂಡ್ ಸೆಟ್ ಬಂದ್ ಆದರೆ ನನಗೂ ಒಸೀ ನಿದ್ದೆ.

ಇನ್ನೂ ಬೆಳಗಿನ ಕಥೆ ಇನ್ನೂ ಘೋರ….

ನಾಲ್ಕು ಗಂಟೆ ಸುಮಾರಿಗೆ ಪಕ್ಕದ ಮನೆಯ ನಡು ವಯಸಿನ ಹೆಂಗಸಿಗೆ ಶಿರಡಿ ಸಾಯಿ ಬಾಬಾ ಅವರ ಮೇಲೆ ಭಕ್ತಿ ಉಕ್ಕಿ ಬಂದು, ಆಕೆ ಆಡಿಯೋ ಪ್ಲೈಯರ್ ಹಚ್ಚಿಟ್ಟು ಬಿಟ್ಟರೆಂದರೆ ಅಲ್ಲಿಗೆ ನನ್ನ ನಿದ್ರೆಗೆ ಫುಲ್ ಸ್ಟಾಪ್…

ಅಯ್ಯೋ ನನ್ನ ಮನೆ ಯಾಕೋ “ಸಂತೆಯಲಿ ಮನೆ ಮಾಡಿ….!!!!” ಅನ್ನೋ ತರಹ ಆಗಿದೆ ಸ್ವಾಮಿ.

(ಚಿತ್ರ ಕೃಪೆ : ಅಂತರ್ಜಾಲ)

Advertisements

About Badarinath Palavalli

ನಾನು ಟೀವಿ ಛಾಯಾಗ್ರಾಹಕ.

Posted on 04/04/2012, in ಲೇಖನಗಳು. Bookmark the permalink. 2 Comments.

  1. ಹಹಹಹ. ಏನು ಮಾಡೋಕ್ಕೆ ಆಗೋಲ್ಲ
    ಗಲಾಟೆ ಜನರೊಂದಿಗೆ ಸೇರಿ
    ಗಲಾಟೆಗೇ ಅಂಜಿದೊಡೆ ಎಂತಯ್ಯಾ..

  2. ನಿಮ್ಮೂರ ಸಂತೆಯಲ್ಲಿ
    ನಮ್ಮೋರು ಇಲ್ಲವೇ ಇಲ್ಲ
    ಇದಕ್ಕೊಂದು ನೆನಪು ಈಗ
    ಎಕ್ಕಡ ಎನ್ನಡ ಮಧ್ಯ ಕನ್ನಡ

    ನಿಮ್ಮ ಮನೆಯ ಸಂತೆಯಲ್ಲಿ
    ನಮ್ಮವರು ಅಕ್ಕಪಕ್ಕ ಇಲ್ಲಿಲ್ಲ
    ಒಬ್ಬರ ಕೂಗು ಮತ್ತೊಬ್ಬರ ನಗು
    ನಡುವಲ್ಲಿ ನಿದ್ದೆಯಿಲ್ಲದ ಕನಸುಗಳು

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: